ನನ್ನ ಬಗ್ಗೆ...

My photo
ಬೆಂಗಳೂರು , ಕರ್ನಾಟಕ, India
ಹುಟ್ಟಿದ್ದು, ಬೆಳೆದಿದ್ದು ಉತ್ತರ ಕನ್ನಡ ಜಿಲ್ಲೆಯ, ಯಲ್ಲಾಪುರದ ಸಮೀಪ ಒಂದು ಹಳ್ಳಿಯಲ್ಲಿ. ಓದಿದ್ದು, ಯಲ್ಲಾಪುರ, ಉಜಿರೆ, ರಾಣೆಬೆನ್ನೂರಿನಲ್ಲಿ. ಕೈ ಹಿಡಿದಿದ್ದು ಉತ್ತರ ಕನ್ನಡ ಜಿಲ್ಲೆಯ, ಸಿದ್ದಾಪುರದ ಹತ್ತಿರದ ಒಂದು ಹಳ್ಳಿಯವರನ್ನು. ನೆಲೆಸಿದ್ದು ಬೆಂಗಳೂರಿನಲ್ಲಿ. ವೃತ್ತಿಯಲ್ಲಿ, ಅಭಿಯಂತರಳು (ಇಂಜಿನಿಯರ್), ಪ್ರವೃತ್ತಿಗಳು ಅನೇಕ. ಮನಸ್ಸಿಗೆ ತೋಚಿದ್ದನ್ನು ಹಂಚಿಕೊಳ್ಳುವ ಆಸೆಯಿಂದ ಇಲ್ಲಿದ್ದೇನೆ. ಓದಿ, ತಪ್ಪಿದ್ದಲ್ಲಿ ತಿದ್ದಿ, ಪ್ರೋತ್ಸಾಹಿಸಿ :)

January 7, 2011

ಹೀಗೊಂದು ಮೆಲುಕು


"ಬರುತಿದೆ ಬರುತಿದೆ ಸಂಕ್ರಾಂತಿ 
ತರಲಿ ಎಲ್ಲರ ಬದುಕಲ್ಲೂ ಹೊಸ ಕ್ರಾಂತಿ !!"


ಚಿಕ್ಕವರಿರುವಾಗ, ಸಂಕ್ರಾಂತಿಗೆ ಒಂದು ವಾರವಿರುವಾಗಲೇ ನಮ್ಮ ತಯಾರಿ ಶುರು ಆಗುತ್ತಿತ್ತು. ಒಳ್ಳೆ ಬಣ್ಣದ ಡಬ್ಬಿ ತರುವುದರಿಂದ ಹಿಡಿದು, ಅದಕ್ಕೆ ಸಿಂಗರಿಸುವುದು, ಸಂಕ್ರಾಂತಿ ಕಾಳುಗಳನ್ನು ತರುವುದು, ಅದಕ್ಕೆ ಎಳ್ಳು ಹುರಿದು ಬೆರೆಸುವುದು, ಹೊಸ ಬಟ್ಟೆ ಕೊಳ್ಳುವುದು, ಕಬ್ಬು ಕಡಿದು ತರುವುದು ...ಹೀಗೆ ಹತ್ತಾರು ಕೆಲಸಗಳು.
ಸಂಕ್ರಾಂತಿಯ ಬೆಳಗು ಆಗುವುದಕ್ಕೆ ಕಾಯುತ್ತಿದ್ದೆವು. ಎದ್ದು, ಸ್ನಾನ ಮಾಡಿ, ಹೊಸ ಬಟ್ಟೆ ತೊಟ್ಟು, ಸಂಕ್ರಾಂತಿ ಕಾಳುಗಳನ್ನು ತಂದಿಟ್ಟ ಚಂದದ ಡಬ್ಬಿಗೆ ತುಂಬಿ ಶಾಲೆಗೆ ಹೊರಡುತ್ತಿದ್ದೆವು. ಅಲ್ಲಿ ಎಲ್ಲರಿಗೂ "ಎಳ್ಳು ಬೆಲ್ಲ ತಿಂದು, ಒಳ್ಳೊಳ್ಳೆ ಮಾತಾಡೋಣ " ಎಂದು ಹೇಳುತ್ತಾ ಸಂಕ್ರಾಂತಿ ಕಾಳುಗಳನ್ನು ಕೊಡುವಾಗಿನ ಮಜವೇ ಬೇರೆ. ಕೊಟ್ಟ ಕಾಳುಗಳಲ್ಲಿ ಎರಡನ್ನಾದರೂ ವಾಪಾಸ್ ಕೊಡಬೇಕೆಂಬುದು ಒಂದು ಪದ್ಧತಿ ( ಈ ಪದ್ದತಿಯಿಂದಾಗಿ ತೆಗೆದುಕೊಂಡು ಹೋದ ಡಬ್ಬಿ ತುಂಬಿಯೇ ಇರುತ್ತಿತ್ತು ). ಇಡೀ ದಿನ ಬರೀ ಸಂಕ್ರಾಂತಿ ಕಾಳುಗಳನ್ನೇ ತಿಂದು ಹೊಟ್ಟೆ ತುಂಬಿಸಿ ಕೊಳ್ಳುತ್ತಿದ್ದೆವು. ಮನೆಗೆ ಬಂದರೂ ಅದೇ ಧ್ಯಾನ. ಇಷ್ಟಾದ ಮೇಲೆ, ಸಂಜೆ ಕಬ್ಬು ತಿನ್ನುವ ಕೆಲಸ. ಆ ವಾರವೆಲ್ಲಾ ಮನ-ಮನೆ ಎಲ್ಲಾ ಸಂಕ್ರಾಂತಿಮಯ. ಸಂಕ್ರಾಂತಿ ಹಬ್ಬ ಮುಗಿದಂತೆ, ಯಾಕೆ ವರ್ಷಕ್ಕೆ ಒಂದೇ ಸಂಕ್ರಾಂತಿ ಎನ್ನುವ ಬೇಸರ. ಏನೇ ಹೇಳಿದ್ರೂ, ಆ ದಿನಗಳೇ ಸೊಗಸು.

ಪ್ರತಿ ವರ್ಷದಂತೆ ಈ ವರ್ಷವೂ ಬರುತಿದೆ ಸಂಕ್ರಾಂತಿ. ಆದರೆ ಮೊದಲಿನ ಆ ಉತ್ಸಾಹ ಈಗ ಇಲ್ಲ :( ಆದರೂ, "ಕಾಲವನ್ನು ತಡೆಯೋರು ಯಾರೂ ಇಲ್ಲಾ ..." ಎಂದು ಕೊಳ್ಳುತ್ತಾ, "ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು"

ಚಿತ್ರ ಕೃಪೆ: ಅಂತರ್ಜಾಲ 

6 comments:

  1. sankraanti habbada shubhashayagalu. ellu bella thindu ollolle maathaadi.

    ReplyDelete
  2. ಚೆನ್ನಾಗಿದೆ.. ನಾವು ಶಾಲೆಯಲ್ಲಿ ಎಳ್ಳು-ಬೆಲ್ಲ ಹಂಚುತ್ತಿದ್ದುದು ನೆನಪಾಯ್ತು.. ಧನ್ಯವಾದಗಳು.

    ReplyDelete
  3. ವಿದ್ಯಾ ಅವರೇ,

    ನಿಮಗೂ ಮತ್ತು ನಿಮ್ಮ ಕುಟುಂಬದವರಿಗೆ ಸಂಕ್ರಾಂತಿಯ ಶುಭಾಶಯಗಳು !
    ಸಂಕ್ರಾಂತಿಯ ಸಂಭ್ರಮದ ನೆನಪುಗಳು ಸೊಗಸಾಗಿವೆ.

    ನಮ್ಮ ಸಾನ್ವಿ ಬ್ಲಾಗಿಗೆ ಭೇಟಿ ನೀಡಿದ್ದಕ್ಕೆ ಧನ್ಯವಾದಗಳು

    ReplyDelete
  4. ನಿಮ್ಮ ಬರಹ ನನ್ನ ಬಾಲ್ಯವನ್ನು ನೆನಪಿಸಿತು..ಸಂಕ್ರಾಂತಿ ಕಾಳುಗಳಲ್ಲಿ ಬಣ್ಣ ಬಣ್ಣ ದ್ದಕ್ಕೆ ಹೆಚ್ಚು ಪ್ರಾಶಸ್ತ್ಯ..ಒಳ್ಳೆಯ ಬರಹ...

    ReplyDelete
  5. ವಿದ್ಯಾ,
    ನಿಮಗೂ ಮಕರ ಸಂಕ್ರಾಂತಿಯ ಶುಭಾಶಯಗಳು!! ಬಾಲ್ಯದ ನೆನಪುಗಳನ್ನು ಮತ್ತೊಮ್ಮೆ ಮೆಲಕುವಂತೆ ಮಾಡಿದಿರಿ ವಂದನೆಗಳು.

    ReplyDelete
  6. ಎಲ್ಲರಿಗೂ ನನ್ನ ಧನ್ಯವಾದಗಳು. ವಾಣಿಶ್ರೀ ಅವರು ಹೇಳಿದಂತೆ, ಬಣ್ಣ ಬಣ್ಣದ ಕಾಳುಗಳಿಗೆ ಹೆಚ್ಚಿನ ಪ್ರಾಶಸ್ತ್ಯ :) ಸಂಕ್ರಾಂತಿಯ ಇನ್ನೊಂದು ನೆನಪೆಂದರೆ, ಎಲ್ಲರಿಗೂ ಶುಭಾಶಯ ಪತ್ರ ಕಳಿಸುತ್ತಿದ್ದುದು..ಆದರೆ ಈಗ ಅವೆಲ್ಲ ನೆನಪು ಮಾತ್ರ !!

    ReplyDelete